ದೇಶದಲ್ಲಿ ಕಳೆದ 24 ಗಂಟೆಯಲ್ಲಿ 4,03,738 ಕೊರೊನಾ ಕೇಸ್ ಪತ್ತೆ

ನವನವದೆಹಲಿ: ಭಾರತದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 4,03,738 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಾಖಲಾಗಿವೆ .

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 4,03,738 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಾಖಲಾಗಿವೆ . ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 2,22,96,414 ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಲ್ಲಿ 4,092 ಕೊರೊನಾ ಸೋಂಕಿತರು ಮೃತಪಟ್ಟಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ವೈರಸ್ ಸೋಂಕಿಗೆ ಮೃತಪಟ್ಟವರ ಸಂಖ್ಯೆ 2,42,362 ಕ್ಕೆ ಏರಿಕೆಯಾಗಿದೆ.

ಭಾರತದಲ್ಲಿ ಒಟ್ಟು ಸೋಂಕಿತರ ಪೈಕಿ ಈವರೆಗೆ 1,83,17,404 ಜನರು ರೋಗದಿಂದ ಚೇತರಿಸಿಕೊಂಡಿದ್ದಾರೆ . ಸದ್ಯ ದೇಶದಲ್ಲಿ 37,36,648 ಸಕ್ರಿಯ ಪ್ರಕರಣಗಳಿವೆ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!