ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 41,664 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, 349 ಮಂದಿ ಬಲಿಯಾಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶನಿವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜಧಾನಿ ಬೆಂಗಳೂರಿನಲ್ಲಿ 13402 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, 94 ಮಂದಿ ಬಲಿಯಾಗಿದ್ದಾರೆ.
ಒಂದೇ ದಿನ 34,425 ಸೋಂಕಿತರು ಗುಣಮುಖಿತರಾಗಿದ್ದು, ಬೆಂಗಳೂರಿನಲ್ಲಿ 7379 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಒಟ್ಟಾರೆ ಗುಣಮುಖಿತರ ಸಂಖ್ಯೆ 15,44,982ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 2,17,1931ಕ್ಕೆ ಏರಿದ್ದು, ಸಾವಿನ ಸಂಖ್ಯೆ 21,434ಕ್ಕೆ ಜಿಗಿತ ಕಂಡಿದೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 6 ಕೋಟಿ ಗಡಿ ದಾಟಿದ್ದು, 6054,94ಕ್ಕೆ ತಲುಪಿದೆ.