ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಹೊಸದಾಗಿ 4272 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 115 ಮಂದಿ ಅಸುನೀಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಕೆ.ಸುಧಾಕರ್ ಶನಿವಾರ ಟ್ವೀಟ್ ಮಾಡಿದ್ದು, ಬೆಂಗಳೂರಿನಲ್ಲಿ 955 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 16 ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಒಂದೇ ದಿನ 6126 ಮಂದಿ ಸೋಂಕಿತರು ಕೊರೊನಾ ಸೋಂಕಿನಿಂದ ಗುಣಮುಖಿತರಾಗಿ ಡಿಸ್ಚಾರ್ಜ್ ಆಗಿದ್ದು, ಬೆಂಗಳೂರಿನಲ್ಲಿ 1174 ಮಂದಿ ಗುಣಮುಖಿತರಾಗಿದ್ದಾರೆ.