ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ ದಾಖಲೆಯ 44,438 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 16,46,303ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 239 ಮಂದಿ ಸೋಂಕಿಗೆ ಬಲಿಯಾಗಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 16,250ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 20,901 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 11,85,299ಕ್ಕೆ ಏರಿಕೆಯಾಗಿದೆ. ಇನ್ನು 4,44,734 ಸಕ್ರೀಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ ಇಂದು 22,112 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 8,19,404ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 115 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.