ದೇಶದಲ್ಲಿ ಕಳೆದ 24 ಗಂಟೆಯಲ್ಲಿ 46,617 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 853 ಮಂದಿ ಬಲಿಯಾಗಿದ್ದಾರೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶುಕ್ರವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3,04,58,251ಕ್ಕೆ ಏರಿಕೆಯಾದರೆ, ಸಾವಿನ ಸಂಖ್ಯೆ 4,00,312ಕ್ಕೆ ತಲುಪಿದೆ.
ದೇಶದಲ್ಲಿ 59,384 ಸೋಂಕಿನಿಂದ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 2,95,48,302ಕ್ಕೆ ಏರಿಕೆಯಾಗಿದೆ. ಇದರಿಂದ ಸಕ್ರಿಯ ಸೋಂಕಿತರ ಸಂಖ್ಯೆ 5,09,637ಕ್ಕೆ ಕುಸಿದಿದೆ.
ದೇಶದಲ್ಲಿ 18,80,026 ಮಂದಿಯನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದ್ದು, 41,42,51,520 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.