ಬೆಂಗಳೂರಿನಲ್ಲಿ ಒಂದೇ ತಿಂಗಳಲ್ಲಿ ಅದರೆ ಮಾರ್ಚ್ 1ರಿಂದ ಇಲ್ಲಿಯವರೆಗೆ 10 ವರ್ಷದೊಳಗಿನ 470 ಮಕ್ಕಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಬೆಂಗಳೂರಿನಲ್ಲಿ ಕೊರೊನಾ 2ನೇ ಅಲೆಯ ಅಬ್ಬರ ಮುಂದುವರಿದಿದ್ದು, ಪ್ರತಿನಿತ್ಯ ಒಟ್ಟಾರೆಯಾಗಿ 1500ಕ್ಕೂ ಅಧಿಕ ಸೋಂಕು ಪ್ರಕರಣಗಳು ವರದಿಯಾಗುತ್ತಿವೆ. ಅದರಲ್ಲೂ ಮಾರ್ಚ್ 1ರಿಂದ 26ರವರೆಗೆ 244 ಬಾಲಕ ಮತ್ತು 228 ಬಾಲಕಿಯರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ತಿಂಗಳ ಆರಂಭದಲ್ಲಿ ಪ್ರತಿದಿನ 8 ರಿಂದ 9 ಪ್ರಕರಣಗಳು ಪತ್ತೆಯಾಗುತ್ತಿದ್ದು, ಮಾಸಾಂತ್ಯದ ವೇಳೆ ಈ ಸಂಖ್ಯೆ 46ಕ್ಕೆ ಏರಿಕೆಯಾಗಿದೆ ಎಂದು ಸರಕಾರದ ಅಂಕಿ-ಅಂಶಗಳು ತಿಳಿಸಿವೆ.
ನಗರದಲ್ಲಿ ಶಾಲೆಗಳನ್ನು ಆರಂಭಿಸಲಾಗಿದ್ದು, ವಿದ್ಯಾಗಾಮ ತರಗತಿ ಕೂಡ ನಡೆಯುತ್ತಿದೆ. ಅಲ್ಲದೇ ಮಕ್ಕಳು ಹೊರಗೆ ಆಡುವುದರಿಂದ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗಲು ಕಾರಣ ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.