ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 4,867 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, ಬೆಂಗಳೂರಿನಲ್ಲಿ 1034 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಸೋಂಕು ಪ್ರಮಾಣ ಇಳಿಕೆಯಾದರೆ, ರಾಜಧಾನಿಯಲ್ಲಿ ಮತ್ತೆ ಹೆಚ್ಚಳ ಕಂಡು ಬಂದಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಪಾಸಿಟಿವಿಟಿ ಪ್ರಮಾಣ ಶೇ.3.25ಕ್ಕೆ ಕುಸಿದಿದೆ.
ರಾಜ್ಯದಲ್ಲಿ ಒಂದು ದಿನದಲ್ಲಿ 142 ಮಂದಿ ಕೊರೊನಾಗೆ ಬಲಿಯಾದರೆ, ಬೆಂಗಳೂರಿನಲ್ಲಿ 28 ಮಂದಿ ಮೃತಪಟ್ಟಿದ್ದಾರೆ. 8,404 ಮಂದಿ ಸೋಂಕಿನಿಂದ ಗುಣಮುಖಿತರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. 1976 ಮಂದಿ ಬೆಂಗಳೂರಿನಲ್ಲಿ ಡಿಸ್ಚಾರ್ಜ್ ಆಗಿದ್ದಾರೆ.