ಶಹಜಹಾನಪುರ(ಉತ್ತರ ಪ್ರದೇಶ) : ಮ್ಯಾನಲ್ ಲೆವೆಲ್ ಕ್ರಾಸಿಂಗ್ ನಲ್ಲಿ ರೈಲು ವಾಹನಗಳ ಮೇಲೆ ಹರಿದ ಪರಿಣಾಮ ಐವರು ಸ್ಥಳದಲ್ಲಿಯೇ ಮೃತಪಟ್ಟು, ಓರ್ವ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಶಹಜಹಾನಪುರದಲ್ಲಿ ನಡೆದಿದೆ.
ದುರ್ಘಟನೆ ನಡೆಯುವ ಸಂದರ್ಭದಲ್ಲಿ ರೈಲ್ವೆ ಹಳಿಯ ಕ್ರಾಸಿಂಗ್ ಗೇಟ್ ಮುಚ್ಚದ ಹಿನ್ನೆಲೆಯಲ್ಲಿ ವಾಹನಗಳು ಚಲಿಸುತ್ತಿದ್ದಾಗ, ರೈಲು ಬಂದ ಪರಿಣಾಮಮ ಘಟನೆ ನಡೆದಿದೆ. ಲಕ್ನೊ-ಚಂಡೀಘಡ ಸೂಪರ್ ಫಾಸ್ಟ್ ಲೊಕೊಮೊಟಿವ್ ರೈಲು ವಾಹನಗಳಿಗೆ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ, ಇದೀಗ ಎರಡೂ ಕಡೆ ರೈಲು ಸಂಚಾರಕ್ಕೆ ವ್ಯತ್ಯಯವುಂಟಾಗಿದೆ.
ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರೈಲ್ವೆ ಎಂಜಿನಿಯರ್ ಗಳ ತಂಡವೊಂದು ಸ್ಥಳಕ್ಕೆ ಧಾವಿಸಿದ್ದು ದುರಸ್ತಿ ಕಾರ್ಯ ನಡೆಯುತ್ತಿದೆ. ಹಾನಿಗೀಡಾಗಿರುವ ಹಳಿಯ ಕೆಲಸ ನಡೆಯುತ್ತಿದೆ. ಮುಂದಿನ ಮೂರ್ನಾಲ್ಕು ಗಂಟೆಗಳಲ್ಲಿ ಸಂಚಾರ ಸಹಜ ಸ್ಥಿತಿಗೆ ಬರಲಿದೆ
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೃತಪಟ್ಟವರ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ್ದು ಪ್ರತಿಯೊಬ್ಬರಿಗೂ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.