5 ವರ್ಷ 3000 ಕೋಟಿ ಬಂಡವಾಳ – ಇದು ಹೊಂಬಾಳೆ ಫಿಲ್ಮ್ಸ್ ಟಾರ್ಗೆಟ್

ಭಾರತೀಯ ಸಿನಿಮಾ ರಂಗಕ್ಕೆ ಅತ್ಯುತ್ತಮ ಸಿನಿಮಾಗಳನ್ನು ನೀಡುತ್ತಾ ಬಂದಿರುವ ಹೊಂಬಾಳೆ ಫಿಲ್ಮ್ಸ್, ಒಂದು ಮಹತ್ವದ ನಿರ್ಧಾರ ತಗೆದುಕೊಂಡಿದೆ ಅನ್ನುವ ವಿಚಾರ ಗಾಂಧಿನಗರದಲ್ಲಿ ಭಾರೀ ಸದ್ದು ಮಾಡುತ್ತಿದೆ.

ಭಾರತೀಯ ಸಿನಿಮಾ ರಂಗಕ್ಕೆ ಅತ್ಯುತ್ತಮ ಸಿನಿಮಾಗಳನ್ನು ನೀಡುತ್ತಾ ಬಂದಿರುವ ಹೊಂಬಾಳೆ ಫಿಲ್ಮ್ಸ್, ( HOMBALE FILMS ) ಒಂದು ಮಹತ್ವದ ನಿರ್ಧಾರ ತಗೆದುಕೊಂಡಿದೆ ಅನ್ನುವ ವಿಚಾರ ಗಾಂಧಿನಗರದಲ್ಲಿ ಭಾರೀ ಸದ್ದು ಮಾಡುತ್ತಿದೆ. ಮುಂದಿನ 5 ವರ್ಷಗಳಲ್ಲಿ ಚಿತ್ರೋದ್ಯಮಕ್ಕೆ 3,000 ಕೋಟಿ ಬಂಡವಾಳ ಹೂಡಲಿದೆಯಂತೆ.

Home - Hombale Films

ಭಾರೀ ಬಜೆಟ್ ಸಿನಿಮಾಗಳ ಜೊತೆಗೆ ಉತ್ತಮ ಬಜೆಟ್ ನಲ್ಲಿ ಹಲವು ಚಿತ್ರಗಳನ್ನು ನಿರ್ಮಾಣ ಮಾಡಲಿದ್ದಾರಂತೆ. ಕೆಜಿಎಫ್, ಕಾಂತಾರ ಸಿನಿಮಾಗಳು ಬಾಕ್ಸ್ ಆಫೀಸಿನಲ್ಲಿ ದಾಖಲೆ ಬರೆದಿವೆ. ಅತೀ ಹೆಚ್ಚು ಲಾಭವನ್ನೂ ತಂದುಕೊಟ್ಟಿವೆ. ಅಲ್ಲದೇ, ಮತ್ತಷ್ಟು ಸಿನಿಮಾಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಈಗಾಗಲೇ ಕನ್ನಡದಲ್ಲಿ 3, ಮಲಯಾಳಂ ನಲ್ಲಿ 1 ಮತ್ತು ತಮಿಳಿನಲ್ಲಿ 1 ಸಿನಿಮಾವನ್ನು ಘೋಷಣೆ ಮಾಡಲಾಗಿದೆ. ಹಿಂದಿಯಲ್ಲೂ 1 ಚಿತ್ರವನ್ನು ಮಾಡುವ ಯೋಜನೆ ಸಿದ್ಧವಾಗಿದೆ. ಮುಂದಿನ ದಿನಗಳಲ್ಲಿ ಭಾರತೀಯ ಹಲವು ಭಾಷೆಗಳಲ್ಲಿ ಸಿನಿಮಾ ಮಾಡಲಿದೆಯಂತೆ ಹೊಂಬಾಳೆ ಫಿಲ್ಮ್ಸ್. ಜಗ್ಗೇಶ್ ನಟನೆಯ ‘ರಾಘವೇಂದ್ರ ಸ್ಟೋರ್ಸ್’ ಬಿಡುಗಡೆಗೆ ಸಿದ್ಧವಾಗಿದೆ. ಇದನ್ನು ಓದಿ :-  ರಸ್ತೆಯಲ್ಲಿ ಯುವತಿಯನ್ನು ಕೊಂದು ತಾನೂ ವಿಷ ಸೇವಿಸಿ ಆಸ್ಪತ್ರೆ ಸೇರಿದ್ದ ಯುವಕ ಸಾವು!

KGF: Chapter 2's Box Office Grand Success Run Leads To Hombale Films Market, Promote & Make Kantara A Big Name At The Box Office

ಪವನ್ ಕುಮಾರ್ ( PAVAN KUMAR )  ಮಲಯಾಳಂ ನಲ್ಲಿ ಭರ್ಜರಿಯಾಗಿಯೇ ಶೂಟಿಂಗ್ ಶುರು ಮಾಡಿದ್ದಾರೆ. ಕೆಲವೇ ದಿನಗಳಲ್ಲಿ ದೊಡ್ಮನೆಯ ಕುಡಿ ಯುವರಾಜ್ ನನ್ನು ಲಾಂಚ್ ಮಾಡುತ್ತಿದ್ದಾರೆ. ಜೊತೆಗೆ ಕಾಂತಾರ 2 ಮತ್ತು KGF ಸಿನಿಮಾದ ಮುಂದುವರೆ ಭಾಗ ಕೂಡ ಸಿನಿಮಾವಾಗಿ ಮೂಡಿ ಬರಲಿದೆ ಎಂದು ಹೇಳಲಾಗುತ್ತಿದೆ. ಅಲ್ಲದೇ, ಹಿಂದಿಯಲ್ಲಿ ಸ್ಟಾರ್ ನಟನ ಚಿತ್ರಕ್ಕೆ ಬಂಡವಾಳ ಹೂಡಲಿದ್ದಾರೆ ಎಂದೂ ಹೇಳಲಾಗುತ್ತಿದೆ.

ಇದನ್ನು ಓದಿ :- ಮೂಗಿನ ಮೂಲಕ ತೆಗೆದುಕೊಳ್ಳುವ ಲಸಿಕೆಯ ತುರ್ತು ಬಳಕೆಗೆ ಕೇಂದ್ರ ಸರ್ಕಾರ ಅನುಮತಿ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!