ಎರಡು ರೈಲುಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಕನಿಷ್ಠ 50 ಮಂದಿ ಮೃತಪಟ್ಟು 70ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಪಾಕಿಸ್ತಾನದ ಉತ್ತರ ಸಿಂಧ್ ಪ್ರಾಂತ್ಯದಲ್ಲಿ ಸಂಭವಿಸಿದೆ.
ಸೋಮವಾರ ಬೆಳಿಗ್ಗೆ ಈ ದುರಂತ ಸಂಭವಿಸಿದ್ದು, ರೈಲಿನಡಿ ಸಿಲುಕಿದವರ ರಕ್ಷಣೆಗೆ ಸೇನೆ ಹಾಗೂ ಅರೆಸೇನಾ ಪಡೆಯನ್ನು ಕರೆಸಲಾಗಿದೆ.
ಕರಾಚಿಯಿಂದ ಸರಗೋವಾಗೆ ತೆರಳುತ್ತಿದ್ದ ಮಿಲ್ಲತ್ ಎಕ್ಸ್ ಪ್ರೆಸ್ ಹಳಿ ತಪ್ಪಿ ಪಕ್ಕದ ಟ್ರ್ಯಾಕ್ ಮೇಲೆ ಬಿದ್ದಿದ್ದು, ರಾವಲ್ಪಿಂಡಿಯಿಂದ ಕರಾಚಿಗೆ ಬರುತ್ತಿದ್ದ ಸರ್ ಸೈಯ್ಯದ್ ಎಕ್ಸ್ ಪ್ರೆಸ್ ಡಿಕ್ಕಿ ಹೊಡೆದಿದೆ. ಇದರಿಂದ ಮಿಲ್ಲತ್ ರೈಲಿನ ಮೇಲೆ ಸೈಯ್ಯದ್ ಎಕ್ಸ್ ಪ್ರೆಸ್ ರೈಲು ಹರಿದು ಜನರು ಸಿಲುಕಿಕೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಗೋಟ್ಕಿ, ಧಾರ್ಕಿ, ಒಬಾರೊ ಮತ್ತು ಮಿರತ್ ಮಥೆಲೊದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದ್ದು, ಆಸ್ಪತ್ರೆಗಳಿಗೆ ಗಾಯಾಳುಗಳನ್ನು ದಾಖಲಿಸಲಾಗಿದೆ.