ಬೆಂಗಳೂರು: ದಿನದಿಂದ ದಿನಕ್ಕೆ ಕೊರೊನಾ ಆರ್ಭಟ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ದಾಖಲೆಯ 50,112 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. 346 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.
ಒಟ್ಟು ಸೋಂಕಿತರ ಸಂಖ್ಯೆ 17,41,046 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು ಒಂದೇ ದಿನ 26,841 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 12,36,854 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ರಾಜ್ಯದಲ್ಲಿ ಬರೋಬ್ಬರಿ 4,87,288 ಸಕ್ರಿಯ ಪ್ರಕರಣಗಳು ಇವೆ. ರಾಜ್ಯದಲ್ಲಿ ಇದುವರೆಗೆ ಕೊರೋನಾ ಸೋಂಕಿನಿಂದ 16,884 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ಒಂದೇ ದಿನ 23,106 ಜನರಿಗೆ ಸೋಂಕು ತಗುಲಿದೆ. 161 ಸೋಂಕಿತರು ಮೃತಪಟ್ಟಿದ್ದು, 3,13,314 ಸಕ್ರಿಯ ಪ್ರಕರಣಗಳಿವೆ.