ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 504 ಮಂದಿಗೆ ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 20 ಮಂದಿ ಮೃತಪಟ್ಟಿದ್ದಾರೆ. ಕಳೆದ ಕೆಲವು ದಿನಗಳಿಗೆ ಹೋಲಿಸಿದರೆ ಸೋಂಕು ಪ್ರಮಾಣದಲ್ಲಿ ಇಳಿಕೆ ಕಂಡು ಬಂದಿದ್ದರೂ ಸಾವಿನ ಸಂಖ್ಯೆ ಹೆಚ್ಚುತ್ತಲೇ ಇದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ 181 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು, 5 ಮಂದಿ ಅಸುನೀಗಿದ್ದಾರೆ.