ಉಪ ಚುನಾವಣೆ : ಬೆಳಗಾವಿ ಶೇ. 54, ಮಸ್ಕಿಯಲ್ಲಿ ಶೇ. 70ರಷ್ಟು ಮತದಾನ

ಬೆಂಗಳೂರು: ರಾಜ್ಯದ ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಸೃಷ್ಟಿಸಿರುವ ಬೆಳಗಾವಿ ಲೋಕಸಭಾ ಕ್ಷೇತ್ರ, ಬೀದರ್ ಜಿಲ್ಲೆಯ ಬಸವಕಲ್ಯಾಣ ಮತ್ತು ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ನಡೆದ ಮತದಾನ ಕೆಲ ಸಣ್ಣಪುಟ್ಟ ಅಹಿತಕರ ಘಟನೆಗಳನ್ನು ಹೊರತುಪಡಿಸಿ, ಉಳಿದಂತೆ ಶಾಂತಿಯುತ ಅಂತ್ಯ ಕಂಡಿದೆ.

ಮೂರು ಕ್ಷೇತ್ರಗಳಲ್ಲಿ ಬೆಳಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯ ವರೆಗೆ ಅವಕಾಶ ಕಲ್ಪಿಸಲಾಗಿತ್ತು. ಸಂಜೆ 5 ಗಂಟೆಯ ವರೆಗೆ ಬೆಳಗಾವಿ – ಶೇ.54.35, ಬಸವಕಲ್ಯಾಣ – ಶೇ.59.57 ಹಾಗೂ ಮಸ್ಕಿ ಕ್ಷೇತ್ರದಲ್ಲಿ ಶೇ. 70.48ರಷ್ಟು ಮತದಾನವಾಗಿದೆ. ಮೂರು ಕ್ಷೇತ್ರಗಳಲ್ಲಿ ಒಟ್ಟು 30 ಮಂದಿ ಅಭ್ಯರ್ಥಿಗಳ ಭವಿಷ್ಯವನ್ನು ಮತದಾರ ಬರೆದಿದ್ದು, ಮೇ 2 ರಂದು ಮತ ಏಣಿಕೆ ನಡೆಯಲಿದೆ.

ಬೆಳಗಾವಿ ಲೋಕಸಭೆ ಉಪ ಚುನಾವಣಾ ಕಣದಲ್ಲಿ ಬಿಜೆಪಿಯಿಂದ ಸುರೇಶ್ ಅಂಗಡಿ ಅವರ ಪತ್ನಿ ಮಂಗಲ ಸುರೇಶ್ ಅಂಗಡಿ ಅವರು ಸ್ಪರ್ಧಿಸಿದ್ದರೆ, ಕಾಂಗ್ರೆಸ್ ಪಕ್ಷದಿಂದ ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಸ್ಪರ್ಧಿಸಿದ್ದಾರೆ. ಜೆಡಿಎಸ್ ಪಕ್ಷ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ.

ಬಸವಕಲ್ಯಾಣ ವಿಧಾನಸಭೆ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಶರಣು ಸಲಗರ ಸ್ಪರ್ಧಿಸಿದ್ದರೆ, ಕಾಂಗ್ರೆಸ್ ಪಕ್ಷದಿಂದ ಬಿ.ನಾರಾಯಣರಾವ್ ಅವರ ಪತ್ನಿ ಮಲ್ಲಮ್ಮ ಬಿ.ನಾರಾಯಣರಾವ್ ಸ್ಪರ್ಧಿಸಿದ್ದಾರೆ. ಜೆಡಿಎಸ್ ಪಕ್ಷದಿಂದ ಸೈಯದ್ ಯಸ್ರಬ್ ಅಲಿ ಖಾದ್ರಿ ಚುನಾವಣಾ ಕಣದಲ್ಲಿದ್ದರೆ, ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖೂಬಾ ಆಖಾಡಕ್ಕಿಳಿದಿದ್ದಾರೆ.

ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಉಪ ಚುನಾವಣಾ ಕಣದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಪ್ರತಾಪಗೌಡ ಪಾಟೀಲ್ ಸ್ಪರ್ಧಿಸಿದ್ದು, ಕಾಂಗ್ರೆಸ್ ಪಕ್ಷದಿಂದ ಬಸನಗೌಡ ತುರವಿಹಾಳ ಸ್ಪರ್ಧಿಸಿದ್ದಾರೆ. ಇಲ್ಲಿ ಜೆಡಿಎಸ್ ಪಕ್ಷ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!