ತಂದೆ-ತಾಯಿಯನ್ನು ಕಳೆದುಕೊಂಡು 577 ಮಕ್ಕಳು ಅನಾಥರಾಗಿದ್ದಾರೆ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ.
ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಸೇರಿ ದೇಶಾದ್ಯಂತ ಒಟ್ಟಾರೆ 577 ಮಕ್ಕಳು ಅನಾಥರಾಗಿದ್ದು, ಕೋವಿಡ್ ನಿಂದ ತಂದೆ-ತಾಯಿಯನ್ನು ಕಳೆದುಕೊಂಡ ಮಕ್ಕಳ ರಕ್ಷಣೆ ಹಾಗೂ ಬೆಂಬಲಕ್ಕೆ ಸರಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದ್ದಾರೆ.
ಏಪ್ರಿಲ್ 1ರಿಂದ ಇಲ್ಲಿಯವರೆಗೆ ತಂದೆ-ತಾಯಿಯನ್ನು ಕಳೆದುಕೊಂಡು 577 ಅನಾಥರಾಗಿದ್ದು, ಅಂತಹ ಮಕ್ಕಳ ಯೋಗಕ್ಷೇಮದ ಮೇಲೆ ನಿಗಾ ವಹಿಸುವಂತೆ ಸ್ಥಳೀಯ ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.
ಮಕ್ಕಳ ಕ್ಷೇಮಾಭಿವೃದ್ಧಿಗೆ ಸರಕಾರದ ಬಳಿ ಹಣದ ಕೊರತೆ ಇಲ್ಲ. ಈ ಕುರಿತು ರಾಜ್ಯ ಹಾಗೂ ಜಿಲ್ಲಾಡಳಿತಗಳ ಜೊತೆ ಕೇಂದ್ರ ಸಂಪರ್ಕದಲ್ಲಿದ್ದು, ನಿರಂತರ ಮಾಹಿತಿ ಪಡೆಯಲಾಗುತ್ತಿದೆ ಎಂದು ಸ್ಮೃತಿ ಇರಾನಿ ಸ್ಪಷ್ಪಪಡಿಸಿದರು.