ಸಾಲಬಾಧೆ ತಾಳಲಾರದೆ ಒಂದೇ ಕುಟುಂಬದ ಆರು ಜನರು ಆತ್ಮಹತ್ಯೆ ಮಾಡಿಕೊಂಡ ಭೀಕರ ಘಟನೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.
ಶಹಪುರ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಗಳಾ ಭೀಮರಾಯ ಸುರಪೂರ (45), ಶಾಂತಮ್ಮ (36), ಸುಮಿತ್ರಾ (12), ಶ್ರೀದೇವಿ (13), ಶಿವರಾಜ (9), ಲಕ್ಷ್ಮೀ (4) ಆತ್ಮಹತ್ಯೆ ಮಾಡಿಕೊಂಡವರು.
ಕೃಷಿ ಹೊಂಡದಲ್ಲಿ ಬಿದ್ದು 6 ಜನರು ಒಂದೇ ಬಾರಿಗೆ ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ಥಳಕ್ಕೆ ಶಹಾಪುರ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು ಆಗಮಿಸಿದ್ದಾರೆ. ಶಹಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.