ಕೊರೊನಾ ಸೋಂಕು ಪ್ರಮಾಣ ಇಳಿಕೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ 6 ಜಿಲ್ಲೆಗಳಲ್ಲಿ ರಾಜ್ಯ ಸರಕಾರ ಅನ್ ಲಾಕ್ ಘೋಷಿಸಿದೆ. ಈ ಮೂಲಕ ಒಟ್ಟಾರೆ ಅನ್ ಲಾಕ್ ಗೊಂಡ ಜಿಲ್ಲೆಗಳ ಸಂಖ್ಯೆ 23ಕ್ಕೆ ಏರಿಕೆಯಾದಂತಾಗಿದೆ.
ಕೊರೊನಾ ಸೋಂಕು ಪ್ರಮಾಣ ಶೇ.5ಕ್ಕಿಂತ ಕಡಿಮೆ ಇರುವ 16 ಜಿಲ್ಲೆಗಳಲ್ಲಿ ಈಗಾಗಲೇ ಲಾಕ್ ಡೌನ್ ನಿಯಮ ಸಡಿಲಿಸಲಾಗಿದೆ. ಸೋಮವಾರ ಮತ್ತೆ 6 ಜಿಲ್ಲೆಗಳಲ್ಲಿ ಅನ್ ಲಾಕ್ ಜಾರಿ ಮಾಡಲಾಗಿದೆ.
ಉಡುಪಿ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ವಿಜಯಪುರ ಜಿಲ್ಲೆಗಳಲ್ಲಿ ಅನ್ ಲಾಕ್ ಘೋಷಿಸಲಾಗಿದ್ದು, ಎಲ್ಲಾ ಅಂಗಡಿಗಳನ್ನು ಸಂಜೆ 5 ಗಂಟೆಯವರೆಗೆ ತೆರೆಯಲು ಅವಕಾಶ ನೀಡಲಾಗಿದೆ.