ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳ ಹಿನ್ನೆಲೆ 6 ರಿಂದ 9ನೇ ತರಗತಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನಿಲ್ಲಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಸುರೇಶ್ಕುಮಾರ್ ಹೇಳಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದ್ದು, ಈ ವಯೋಮಾನದ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. 10 ನೇ ತರಗತಿಗಳು ಎಂದಿನಂತೆ ಮುಂದುವರೆಯಲಿದ್ದು, ವಿದ್ಯಾರ್ಥಿಗಳ ಹಾಜರಾತಿ ಕಡ್ಡಾಯವಲ್ಲ ಎಂದಿದ್ದಾರೆ.
ರಾಜ್ಯದ ಉಳಿದೆಡೆ ಪ್ರಸ್ತುತ ಇರುವ ವ್ಯವಸ್ಥೆ ಮುಂದುವರೆಯಲಿದ್ದು, ಮುಂದಿನ ದಿನಗಳಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಸೂಕ್ತ ತೀರ್ಮಾನವನ್ನು ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.