ಬೆಂಗಳೂರಿನಲ್ಲಿ 6ರಿಂದ 9ನೇ ತರಗತಿವರೆಗಿನ ಶಾಲೆಗಳನ್ನು ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ಸ್ಥಗಿತಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ಕೊರೊನಾ 2ನೇ ಅಲೆಯ ಆರ್ಭಟದ ಹಿನ್ನೆಲೆಯಲ್ಲಿ ರಾಜ್ಯ ಶಿಕ್ಷಣ ಇಲಾಖೆ ಶುಕ್ರವಾರ ಹೊರಡಿಸಿದ ಆದೇಶದಲ್ಲಿ 6 ರಿಂದ 9ರವರೆಗಿನ ಬೌದ್ಧಿಕ ತರಗತಿಗಳನ್ನು ಕೂಡಲೇ ಸ್ಥಗಿತಗೊಳಿಸುವಂತೆ ಆದೇಶ ಹೊರಡಿಸಿದೆ.
ಈಗಾಗಲೇ 1ರಿಂದ 5ನೇ ತರಗತಿವರೆಗೆ ಶಾಲೆಗಳನ್ನು ಸ್ಥಗಿತಗೊಳಿಸಲಾಗಿದ್ದು, ಇದೀಗ 6ರಿಂದ 9ನೇ ತರಗತಿವರೆಗೆ ತರಗತಿ ಸ್ಥಗಿತಗೊಳಿಸಲು ಆದೇಶಿಸಿದೆ. ಆದರೆ 10ನೇ ತರಗತಿ ಎಂದಿನಂತೆ ನಡೆಯಲಿದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
10ನೇ ತರಗತಿಗೆ ಹಾಜರಾತಿ ಕಡ್ಡಾಯ ಅಲ್ಲ. ಆದರೆ ಮುಂದಿನ ಶೈಕ್ಷಣಿಕ ವರ್ಷದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ನಡೆಸಬೇಕಾದ ಅನಿವಾರ್ಯತೆ ಇರುವುದರಿಂದ ತರಗತಿ ನಡೆಯಲಿದೆ.
ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಪ್ರಸ್ತುತ ಇರುವ ವ್ಯವಸ್ಥೆ ಮುಂದುವರೆಯಲಿದೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.