ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 62,714 ಸೋಂಕು ಪ್ರಕರಣಗಳು ವರದಿಯಾಗಿದ್ದು, 312 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಕೊರೊನಾ ಸೋಂಕು ಪ್ರಮಾಣ ದಿನದಿಂದ ದಿನಕ್ಕೆ ಜಿಗಿತ ಕಾಣುತ್ತಿದ್ದು, ಅಕ್ಟೋಬರ್ ನಂತರ ಅತೀ ಹೆಚ್ಚು ಪ್ರಕರಣ ವರದಿಯಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 1,19,71,624ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 1,61,552ಕ್ಕೆ ಜಿಗಿತ ಕಂಡಿದೆ. 12 ರಾಜ್ಯ ಹಾಗೂ ಒಂದು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೊರೊನಾ ಆರ್ಭಟ ಹೆಚ್ಚಾಗಿದ್ದು, ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 4,86,310ಕ್ಕೆ ಜಿಗಿತ ಕಂಡಿದೆ.