ನವದೆಹಲಿ: ಕಳೆದ 24 ಗಂಟೆಯಲ್ಲಿ ದೇಶದಲ್ಲಿ 67,208 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. 2,330 ಮಂದಿ ಸಾವನ್ನಪ್ಪಿದ್ದು, ಒಟ್ಟು ಸೋಂಕಿತರ ಸಂಖ್ಯೆ 2,97,00,313 ಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 2,97,00,313 ಕ್ಕೆ ಏರಿಕೆಯಾಗಿದ್ದು, ಒಟ್ಟಾರೆ ಸಾವಿನ ಸಂಖ್ಯೆ 3,81,903ಕ್ಕೆ ಜಿಗಿತ ಕಂಡಿದೆ.
ಇನ್ನು ದೇಶದಲ್ಲಿ 8,26,740 ಸಕ್ರಿಯ ಪ್ರಕರಣಗಳಿದ್ದು, 2,84,91,670 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 1,03,570 ಸೋಂಕಿತರು ಗುಣಮುಖರಾಗಿ ಡಿಶ್ಚಾರ್ಜ್ ಆಗಿದ್ದಾರೆ.