ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 679 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 21 ಮಂದಿ ಸಾವಿಗೀಡಾಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ.ಸುಧಾಕರ್ ಸೋಮವಾರ ಟ್ವೀಟ್ ಮಾಡಿದ್ದು, ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 11,360ಕ್ಕೆ ಕುಸಿದಿದ್ದು, ಪಾಸಿಟಿವಿಟ ಪ್ರಮಾಣ ಶೇ.1.29ಕ್ಕೆ ಇಳಿಕೆಯಾಗಿದೆ.
ಬೆಂಗಳೂರಿನಲ್ಲಿ ಒಂದೇ ದಿನದಲ್ಲಿ 346 ಹೊಸದಾಗಿ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 8 ಮಂದಿ ಮೃತಪಟ್ಟಿದ್ದಾರೆ.