ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇ ದಿನ ದಾಖಲೆಯ 6976 ಕೊರೋನಾ ಕೇಸ್ ದಾಖಲಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 10,33,560 ಕ್ಕೆ ಏರಿಕೆಯಾಗಿದೆ.
353 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 49,254 ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ ಇವತ್ತು ಒಂದೇ ದಿನ 35 ಜನ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 12,731 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.
ಇನ್ನೂ ಇಂದು 2794 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 9,71,556 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಬೆಂಗಳೂರಿನಲ್ಲಿ ಕೊರೋನಾ ಸ್ಪೋಟವಾಗಿದ್ದು, 4991 ಜನರಿಗೆ ಕೊರೋನಾ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ ಒಂದೇ ದಿನ 25 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಬರೋಬ್ಬರಿ 35,789 ಸಕ್ರಿಯ ಪ್ರಕರಣಗಳಿವೆ.