ಕಟ್ಟಡದ ಮೇಲ್ಫಾವಣಿ ಕುಸಿದ ಪರಿಣಾಮ 7 ಮಂದಿ ಮೃತಪಟ್ಟು, ಕನಿಷ್ಠ 5 ಮಂದಿ ಸಿಲುಕಿರುವ ಘಟನೆ ಮಹಾರಾಷ್ಟ್ರದ ಥಾಣೆ ಬಳಿಯ ಉಯೇನ್ ಸಾಗರ್ ಬಳಿ ಶುಕ್ರವಾರ ರಾತ್ರಿ ಸಂಭವಿಸಿದೆ.
ಸಾಯಿ ಸಿದ್ಧಿ ಕಟ್ಟಡದ 5ನೇ ಅಂತಸ್ತಿನ ಮೇಲ್ಫಾವಣಿ ಶುಕ್ರವಾರ ರಾತ್ರಿ 9.30ರ ಸುಮಾರಿಗೆ ನೆಲ ಮಹಡಿಯಲ್ಲಿದ್ದ 8ರಿಂದ 9 ಮಂದಿಯ ಮೇಲೆ ಬಿದ್ದಿದೆ ಎಂದು ಥಾಣೆ ಮಹಾನಗರ ಪಾಲಿಕೆ ಅಧಿಕಾರಿಗಳು ಹೇಳಿದ್ದಾರೆ.
ದುರ್ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿ ಶಾಮಕ ದಳ ಹಾಗೂ ಪೊಲೀಸ್ ಸಿಬ್ಬಂದಿ ಘಟನಾ ಸ್ಥಳಕ್ಕೆ ಆಗಮಿಸಿದ್ದು, 7 ಮಂದಿಯ ಶವವನ್ನು ಹೊರತೆಗೆಯಲಾಗಿದೆ. ಅವಶೇಷಗಳಡಿ ಎಷ್ಟು ಜನ ಸಿಲುಕಿದ್ದಾರೆ ಎಂದು ನಿಖರವಾಗಿ ಹೇಳಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.