ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 775 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 9 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಭಾನುವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಟ್ಟಾರೆ ಸಕ್ರಿಯ ಪ್ರಕರಣಗಳ ಸಂಖ್ಯೆ 13,213ಕ್ಕೆ ಇಳಿದಿದೆ.
ಬೆಂಗಳೂರಿನಲ್ಲಿ ಒಂದು ದಿನದಲ್ಲಿ 255 ಕೊರೊನಾ ಸೋಂಕು ಪ್ರಕರಣಗಳು ಕಾಣಿಸಿಕೊಂಡಿದ್ದು, ಮೂವರು ಮೃತಪಟ್ಟಿದ್ದಾರೆ. ಇದರಿಂದ ರಾಜ್ಯದಲ್ಲಿ ಸೋಂಕು ಪ್ರಮಾಣದಲ್ಲಿ ಇಳಿಕೆ ಕಂಡು ಬಂದಿದೆ.