ಬೆಂಗಳೂರು : ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 7,810 ಕೊರೊನಾ ಪಾಸಿಟಿವ್ ಕೇಸ್ ದೃಢಪಟ್ಟಿದ್ದು, 125 ಸೋಂಕಿತರು ಸಾವನ್ನಪ್ಪಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 27,65,134ಕ್ಕೆ ಏರಿಕೆಯಾಗಿದೆ.
ರಾಜ್ಯ ಆರೋಗ್ಯ ಇಲಾಖೆ ಭಾನುವಾರದ ಹೆಲ್ತ್ ಬುಲೆಟಿನ್ ಪ್ರಕಾರ ರಾಜ್ಯದಲ್ಲಿ ಇಂದು 7,810 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. 125 ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 32,913 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಇಂದು 18,648 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 25,51,365 ಮಂದಿ ಗುಣಮುಖರಾಗಿ ಡಿಶ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು 1,80,835 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ ಇಂದು 1,348 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 23 ಸೋಂಕಿತರು ಸಾವನ್ನಪ್ಪಿದ್ದಾರೆ. 85,995 ಸಕ್ರಿಯ ಪ್ರಕರಣಗಳಿವೆ.