ನವದೆಹಲಿ: ಕಳೆದ 24 ಗಂಟೆಯಲ್ಲಿ ದೇಶದಲ್ಲಿ 80,834 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. 3,303 ಮಂದಿ ಸಾವನ್ನಪ್ಪಿದ್ದು, ಒಟ್ಟು ಸೋಂಕಿತರ ಸಂಖ್ಯೆ 2,94,39,989 ಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 2,94,39,989 ಕ್ಕೆ ಏರಿಕೆಯಾಗಿದ್ದು, ಒಟ್ಟಾರೆ ಸಾವಿನ ಸಂಖ್ಯೆ 3,70,384ಕ್ಕೆ ಜಿಗಿತ ಕಂಡಿದೆ.
ಇನ್ನು ದೇಶದಲ್ಲಿ 10,26,159 ಸಕ್ರಿಯ ಪ್ರಕರಣಗಳಿದ್ದು, 2,80,43,446 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 1,32,062 ಸೋಂಕಿತರು ಗುಣಮುಖರಾಗಿ ಡಿಶ್ಚಾರ್ಜ್ ಆಗಿದ್ದಾರೆ.