ಬೆಂಗಳೂರು : ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 8,249 ಕೊರೊನಾ ಪಾಸಿಟಿವ್ ಕೇಸ್ ದೃಢಪಟ್ಟಿದ್ದು, 159 ಸೋಂಕಿತರು ಸಾವನ್ನಪ್ಪಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 27,47,539ಕ್ಕೆ ಏರಿಕೆಯಾಗಿದೆ.
ರಾಜ್ಯ ಆರೋಗ್ಯ ಇಲಾಖೆ ಹೆಲ್ ಬುಲೆಟಿನ್ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಇಂದು 8,249 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. 159 ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 32,644 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಇಂದು 14,975 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 25,11,105 ಮಂದಿ ಗುಣಮುಖರಾಗಿ ಡಿಶ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು 2,03,769ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ ಇಂದು 1,154 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 48 ಸೋಂಕಿತರು ಸಾವನ್ನಪ್ಪಿದ್ದಾರೆ. 91,760 ಸಕ್ರಿಯ ಪ್ರಕರಣಗಳಿವೆ.