ದೇಶದಲ್ಲಿ ಕಳೆದ 24 ಗಂಟೆಯಲ್ಲಿ 84,332 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 4002 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಕಳೆದ 70 ದಿನಗಳಲ್ಲೇ ಕನಿಷ್ಠ ಪ್ರಮಾಣದ ಸೋಂಕು ಪ್ರಕರಣಗಳು ದೃಢಪಟ್ಟಿವೆ.
ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 2,93,59,115ಕ್ಕೆ ಏರಿಕೆಯಾದರೆ, ಸಾವಿನ ಸಂಖ್ಯೆ 3,67,081ಕ್ಕೆ ಜಿಗಿತ ಕಂಡಿದೆ. ದೇಶದಲ್ಲಿ ಸೋಂಕು ಪ್ರಕರಣ ಇಳಿಕೆಯಾಗುತ್ತಿದ್ದರೂ ಸಾವಿನ ಸಂಖ್ಯೆ ಹೆಚ್ಚುತ್ತಿರುವುದು ಆತಂಕ ಹೆಚ್ಚಿಸಿದೆ.
1,21,311 ಮಂದಿ ಕಳೆದ ಒಂದು ದಿನದಲ್ಲಿ ಗುಣಮುಖಿತರಾಗಿ ಡಿಸ್ಚಾರ್ಜ್ ಆಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 2,79,11,384ಕ್ಕೆ ಏರಿಕೆಯಾಗಿದೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 10,80,690ಕ್ಕೆ ಕುಸಿದಿದೆ.