ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 851 ಮಂದಿಗೆ ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 15 ಮಂದಿ ಬಲಿಯಾಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಒಟ್ಟಾರೆ ಸಕ್ರಿಯ ಪ್ರಕರಣಗಳ ಸಂಖ್ಯೆ 17,432ಕ್ಕೆ ಇಳಿದಿದೆ.
ಬೆಂಗಳೂರಿನಲ್ಲಿ ಕಳೆದ 24 ಗಂಟೆಯಲ್ಲಿ 248 ಕೊರೊನಾ ಸೋಂಕು ಪ್ರಕರಣಗಳು ಕಂಡು ಬಂದಿದ್ದು, 3 ಮಂದಿ ಅಸುನೀಗಿದ್ದಾರೆ.