ನವದೆಹಲಿ: ಕಳೆದ 24 ಗಂಟೆಯಲ್ಲಿ ದೇಶದಲ್ಲಿ 86,498 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. 2,123 ಮಂದಿ ಸಾವನ್ನಪ್ಪಿದ್ದು, ಒಟ್ಟು ಸೋಂಕಿತರ ಸಂಖ್ಯೆ 2,89,96,473ಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 2,89,96,473ಕ್ಕೆ ಏರಿಕೆಯಾಗಿದ್ದು, ಒಟ್ಟಾರೆ ಸಾವಿನ ಸಂಖ್ಯೆ 3,51,309ಕ್ಕೆ ಜಿಗಿತ ಕಂಡಿದೆ.
ಇನ್ನು ದೇಶದಲ್ಲಿ 13,03,702 ಸಕ್ರಿಯ ಪ್ರಕರಣಗಳಿದ್ದು, 2,73,41,462 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 1,82,282 ಸೋಂಕಿತರು ಗುಣಮುಖರಾಗಿ ಡಿಶ್ಚಾರ್ಜ್ ಆಗಿದ್ದಾರೆ.