ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 8778 ಕೊರೋನಾ ಕೇಸ್ಗಳು ಪತ್ತೆಯಾಗಿವೆ. ಸೋಂಕಿತರ ಸಂಖ್ಯೆ 78617ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಕೊರೋನಾ ಉಲ್ಭಣವಾಗಿದ್ದು, ಇಂದು ಈ ಮಹಾಮಾರಿಯಿಂದಾಗಿ 67 ಜನರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 13,008 ಕ್ಕೆ ಏರಿಕೆಯಾಗಿದೆ.
ಇನ್ನು ಈ ದಿನ ಕೊರೊನಾ ಸೋಂಕಿನಿಂದ 6079 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಸೋಂಕಿನಿಂದ ಗುಣಮುಖರಾದವ್ರ ಸಂಖ್ಯೆ 9,92,003 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಇನ್ನು ಈಗ ರಾಜ್ಯದಲ್ಲಿ 78,617 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 474 ಮಂದಿ ತೀವ್ರ ನಿಗಾ ಘಟಕಗಳಲ್ಲಿದ್ದಾರೆ.
ಬೆಂಗಳೂರಿನಲ್ಲಿ ಇಂದು ಬರೋಬ್ಬರಿ 5500 ಕೇಸ್ ಪತ್ತೆಯಾಗಿದ್ದು, 55 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇಂದು 4415 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬೆಂಗಳೂರಿನಲ್ಲಿ ಸದ್ಯ 57575 ಸಕ್ರಿಯ ಪ್ರಕರಣಗಳಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.