ದೇಶದಲ್ಲಿ ಕಳೆದ 24 ಗಂಟೆಯಲ್ಲಿ 9283 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟರೆ 437 ಮಂದಿ ಸೋಂಕಿನಿಂದ ಅಸುನೀಗಿದ್ದಾರೆ. ಈ ಮೂಲಕ ದೇಶದಲ್ಲಿ ಮತ್ತೆ ಕೊರೊನಾ ಸೋಂಕು ಮತ್ತು ಸಾವಿನ ಸಂಖ್ಯೆಯಲ್ಲಿ ಏರಿಕೆ ಕಂಡು ಬಂದಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಂದೇ ದಿನದಲ್ಲಿ 10,949 ಮಂದಿ ಸೋಂಕಿನಿಂದ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 3,39,57,749ಕ್ಕೆ ಏರಿದೆ.
ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3,45,27,580ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 4,66,147ಕ್ಕೆ ಜಿಗಿತ ಕಂಡಿದೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 1,11,481ಕ್ಕೆ ಇಳಿಕೆಯಾಗಿದೆ.