ಬೆಳಗಾವಿ (Belagavi) ಯ ಮುದೇನೂರು ಗ್ರಾಮದಲ್ಲಿ ಕಲುಷಿತ ನೀರು (Contaminated water) ಸೇವಿಸಿ ಒಟ್ಟು 94 ಜನರು ಅಸ್ವಸ್ಥರಾಗಿದ್ದಾರೆ. ನಾಲ್ವರ ಸ್ಥಿತಿ ಗಂಭೀರವಾಗಿ ಬಾಗಲಕೋಟೆ (Bagalkote) ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಮುದೇನೂರು ಗ್ರಾಮದಲ್ಲಿ ಕುಡಿಯುವ ನೀರು ಪೂರೈಕೆಯ ಪೈಪ್ ಒಡೆದು ಅವಘಡ ಸಂಭವಿಸಿದೆ. ಮುದೇನೂರು ಗ್ರಾಮದ ನಿವಾಸಿ ( 70 )ಶಿವಪ್ಪ ಮೃತ ದುರ್ದೈವಿ.
ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಶಿವಪ್ಪರನ್ನು ರಾಮದುರ್ಗ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಾಗಲಕೋಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ವೃದ್ಧ ಮೃತಪಟ್ಟಿದ್ದಾರೆ. ಕಳೆದ 4 ದಿನಗಳ ಅಂತರದಲ್ಲಿ ಹಂತ ಹಂತವಾಗಿ ಒಟ್ಟು 94 ಜನ ಅಸ್ವಸ್ಥರಾಗಿದ್ದಾರೆ. ಕುಡಿಯುವ ನೀರು ಪೂರೈಕೆಯ ಪೈಪ್ ಅಲ್ಲಲ್ಲಿ ಒಡೆದು ಚರಂಡಿ ನೀರು ಸೇರ್ಪಡೆಯಾಗಿದೆ. ಮುದೇನೂರು ಗ್ರಾಮದ ಬಸವಣ್ಣ ದೇವರ ಗುಡಿ ಓಣಿ, ಲಕ್ಕಮ್ಮದೇವಿ ಗುಡಿ ಓಣಿ, ಬೀರದೇವರ ಗುಡಿ ಓಣಿಯ 94 ನಿವಾಸಿಗಳು ಅಸ್ವಸ್ಥರಾಗಿದ್ದಾರೆ. 44 ಪುರುಷರು, 30 ಮಹಿಳೆಯರು, 12 ಬಾಲಕರು, 8 ಬಾಲಕಿಯರು ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರಿಗೆ ಬಟಕುರ್ಕಿ ಪ್ರಾಥಮಿಕ ಆರೋಗ್ಯ ಕೇಂದ್ರ, ರಾಮದುರ್ಗ ತಾಲೂಕು ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ವಾಂತಿ ಭೇದಿ ಸಮಸ್ಯೆಯಿಂದ ಹಲವರು ಬಳಲುತ್ತಿದ್ದಾರೆ. ಇದನ್ನೂ ಓದಿ :- ದೀಪಾವಳಿ ತಂದ ಅಂಧಕಾರ– ಬೆಂಗಳೂರಿನಲ್ಲಿ ಮಕ್ಕಳ ಕಣ್ಣಿನ ಗುಡ್ಡೆ ಸೀಳಿದ ಪಟಾಕಿಗಳು !
ಇನ್ನೊಂದೆಡೆ ಕಲುಷಿತ ನೀರಿಗೆ ಮುದೇನೂರ ಗ್ರಾಮದಲ್ಲಿ ಮತ್ತೊಂದು ಬಲಿಯಾಗಿದೆ. ರಾಮದುರ್ಗ ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮುದೇನೂರು ಗ್ರಾಮದ ಸರಸ್ವತಿ ನಿಂಗಪ್ಪ ಹಾವಳ್ಳಿ (70) ಮೃತರಾಗಿದ್ದಾರೆ. ಮುದೇನೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟವರ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ. ಇಷ್ಟೆಲ್ಲ ಅನಾಹುತವಾದ್ರೂ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಸ್ಥಳಕ್ಕೆ ಭೇಟಿ ನೀಡಿಲ್ಲ. ಡಿಸಿ ಹಾಗೂ ರಾಮದುರ್ಗ ತಹಶೀಲ್ದಾರ್ ವಿರುದ್ಧ ಮುದೇನೂರ ಗ್ರಾಮಸ್ಥರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಇದನ್ನೂ ಓದಿ :- ಮಾಡೆಲಿಂಗ್ ಜೊತೆ ಮೋಜು- ಪತ್ನಿ ಮೇಲೆ ಕಾರು ಹರಿಸಿದ ನಿರ್ಮಾಪಕ !