ನವದೆಹಲಿ: ಕಳೆದ 24 ಗಂಟೆಯಲ್ಲಿ ದೇಶದಲ್ಲಿ 94,052 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. 6,148 ಮಂದಿ ಸಾವನ್ನಪ್ಪಿದ್ದು, ಒಟ್ಟು ಸೋಂಕಿತರ ಸಂಖ್ಯೆ 2,91,83,121 ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 2,91,83,121ಕ್ಕೆ ಏರಿಕೆಯಾಗಿದ್ದು, ಒಟ್ಟಾರೆ ಸಾವಿನ ಸಂಖ್ಯೆ 3,59,676ಕ್ಕೆ ಜಿಗಿತ ಕಂಡಿದೆ.
ಇನ್ನು ದೇಶದಲ್ಲಿ 11,67,952 ಸಕ್ರಿಯ ಪ್ರಕರಣಗಳಿದ್ದು, 2,76,55,493 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 1,51,367 ಸೋಂಕಿತರು ಗುಣಮುಖರಾಗಿ ಡಿಶ್ಚಾರ್ಜ್ ಆಗಿದ್ದಾರೆ.