ರಾಜ್ಯದಲ್ಲಿ ಸುಮಾರು 3 ತಿಂಗಳ ನಂತರ ಮೊದಲ ಬಾರಿ ಒಂದು ಸಾವಿರಕ್ಕಿಂತ ಕಡಿಮೆ ಪ್ರಮಾಣದಲ್ಲಿ ಸೋಂಕು ಪ್ರಕರಣಗಳು ರದಿಯಾಗಿದ್ದು, 15 ಮಂದಿ ಅಸುನೀಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಂದೇ ದಿನ 973 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಬೆಂಗಳೂರಿನಲ್ಲಿ 264 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.
ಬೆಂಗಳೂರಿನಲ್ಲಿ ಕೇವಲ ಮೂವರು ಸೋಂಕಿಗೆ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 18,392ಕ್ಕೆ ಕುಸಿದಿದೆ.