ಬೆಂಗಳೂರು : ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 9,785 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 144 ಸೋಂಕಿತರು ಸಾವನ್ನಪ್ಪಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 27,57,324ಕ್ಕೆ ಏರಿಕೆಯಾಗಿದೆ.
ರಾಜ್ಯ ಆರೋಗ್ಯ ಇಲಾಖೆ ಹೆಲ್ ಬುಲೆಟಿನ್ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಇಂದು 9,785 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. 144 ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 32,788 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಇಂದು 21,614 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 25,32,719 ಮಂದಿ ಗುಣಮುಖರಾಗಿ ಡಿಶ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು 1,91,796 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ ಇಂದು 2,454 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 21 ಸೋಂಕಿತರು ಸಾವನ್ನಪ್ಪಿದ್ದಾರೆ. 88,795 ಸಕ್ರಿಯ ಪ್ರಕರಣಗಳಿವೆ.