ಬೆಂಗಳೂರು : ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ 9808 ಕೊರೊನಾ ಪಾಸಿಟಿವ್ ಕೇಸ್ ದೃಢಪಟ್ಟಿದ್ದು, 179 ಸೋಂಕಿತರು ಸಾವನ್ನಪ್ಪಿದ್ದಾರೆ.
ರಾಜ್ಯ ಆರೋಗ್ಯ ಇಲಾಖೆ ಹೆಲ್ ಬುಲೆಟಿನ್ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಇಂದು 9,808 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 27,17,289ಕ್ಕೆ ಏರಿಕೆಯಾಗಿದೆ. ಇಂದು 179 ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 32,099 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಇಂದು 23,449 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 24,60,165 ಮಂದಿ ಗುಣಮುಖರಾಗಿ ಡಿಶ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು 2,25,004 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ ಇಂದು 2,028 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 44 ಸೋಂಕಿತರು ಸಾವನ್ನಪ್ಪಿದ್ದಾರೆ. 1,01,965 ಸಕ್ರಿಯ ಪ್ರಕರಣಗಳಿವೆ.