ಹಿಮಾಚಲ ಪ್ರದೇಶ (Himachal pradesh) ಕ್ಕೆ ಮಹಿಳಾ ಮುಖ್ಯಮಂತ್ರಿ (Women chief minister) ಘೋಷಿಸುವ ಸಾಧ್ಯತೆ ಇದೆ. ಹಿಮಾಚಲ ಪ್ರದೇಶ ರಾಜ್ಯ ಕಾಂಗ್ರೆಸ್ ಅಧ್ಯಕ್ಷೆ ಪ್ರತಿಭಾ ಸಿಂಗ್ (Prathibha singh), ಮಾಜಿ ರಾಜ್ಯಾಧ್ಯಕ್ಷ ಸುಖವಿಂದರ್ ಸಿಂಗ್ ಸುಖು ( Sukhwinder Singh Sukhu) , ವಿಧಾನಸಭೆಯ ವಿರೋಧ ಪಕ್ಷದ ನಾಯಕ ಮುಖೇಶ್ ಅಗ್ನಿಹೋತ್ರಿಮ್ ( Mukesh Agnihotrim ) , ಹಿರಿಯ ನಾಯಕ ಸುಧೀರ್ ಶರ್ಮಾ (Sudhir sharma) ಮತ್ತು ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅವರ ಪುತ್ರ ವಿಕ್ರಮಾದಿತ್ಯ ಸಿಂಗ್ ಅವರು ಮುಖ್ಯಮಂತ್ರಿ ಹುದ್ದೆಯ ರೇಸ್ನಲ್ಲಿದ್ದಾರೆ.
ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸ್ಥಾನದ ರೇಸ್ನಲ್ಲಿ ಪ್ರತಿಭಾ ಸಿಂಗ್ ಮುನ್ನಡೆಯಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್ ಅವರನ್ನು ಮುಖ್ಯಮಂತ್ರಿ ಮಾಡಿದರೆ ರಾಜ್ಯದ ಮೊದಲ ಮಹಿಳಾ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಹಿಮಾಚಲ ಪ್ರದೇಶದ ಕಾಂಗ್ರೆಸ್ನ (Congress) ಮಾಜಿ ಅಧ್ಯಕ್ಷ ಸುಖವಿಂದರ್ ಸಿಂಗ್ ಸುಖು ಕೂಡ ಮುಖ್ಯಮಂತ್ರಿ ಹುದ್ದೆಯ ರೇಸ್ನಲ್ಲಿದ್ದಾರೆ. ಸುಖು ಅವರು ನೌಡನ್ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಅವರು ಹಿಮಾಚಲ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರೂ ಆಗಿದ್ದಾರೆ. ಇದನ್ನು ಓದಿ : – ಹಿಮಾಚಲ ಪ್ರದೇಶದ ಸಿಎಂ ಜೈರಾಮ್ ಠಾಕೂರ್ ರಾಜೀನಾಮೆ
ವಿರೋಧ ಪಕ್ಷದ ನಾಯಕ ಮುಖೇಶ್ ಅಗ್ನಿಹೋತ್ರಿ ಕೂಡ ಮುಖ್ಯಮಂತ್ರಿ ಹುದ್ದೆಯ ರೇಸ್ ನಲ್ಲಿದ್ದಾರೆ. ಅವರು ನಾಲ್ಕು ಬಾರಿ ಶಾಸಕರಾಗಿದ್ದಾರೆ. 2017 ರ ಮೊದಲು, ಅವರು ವೀರಭದ್ರ ಸಿಂಗ್ ನೇತೃತ್ವದ ಸರ್ಕಾರದಲ್ಲಿ ಪ್ರಮುಖ ಖಾತೆಗಳನ್ನು ಸಹ ನಿರ್ವಹಿಸಿದ್ದರು. ವಿಕ್ರಮಾದಿತ್ಯ ಸಿಂಗ್ (Vikramaadhitya singh) ಮಂಡಿ ಸಂಸದೆ ಪ್ರತಿಭಾ ಸಿಂಗ್ ಅವರ ಪುತ್ರ. ಅವರು ಶಿಮ್ಲಾ ಗ್ರಾಮಾಂತರದಿಂದ ಸತತ ಎರಡನೇ ಬಾರಿಗೆ ಚುನಾವಣೆಯಲ್ಲಿ ಗೆದ್ದಿದ್ದಾರೆ. ಮುಖ್ಯಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿಗಳಲ್ಲಿ ಇವರು ಒಬ್ಬರು.
ಇದನ್ನು ಓದಿ : – ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಸೋಲಿಗೆ ಕಾರಣವೇನು ಗೊತ್ತಾ…?