ಬಿಬಿಎ ವಿದ್ಯಾರ್ಥಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ನಗರ ಹೊರವಲಯದಲ್ಲಿರುವ ಎಸ್ ಜೆ ಸಿ ಐ ಟಿ ಕಾಲೇಜ್ ನಲ್ಲಿ ನಡೆದಿದೆ.
ಮೃತ ಯುವಕನನ್ನು ಗೌತಮ್ ಎಂದು ಗುರುತಿಸಲಾಗಿದ್ದು, ಕಾಲೇಜು ಹೊರವಲಯದ ನಿರ್ಜನ ಪ್ರದೇಶದಲ್ಲಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಐಪಿಎಲ್ ( IPL ) ಬೆಟ್ಟಿಂಗ್ ನಲ್ಲಿ ನಷ್ಟ ಅನುಭವಿಸಿ ಸಾಲಗಳಿಗೆ ಸಿಲುಕಿಕೊಂಡಿದ್ದ ಎನ್ನಲಾಗಿದೆ. ಸಾಲಗಾರರ ಕಾಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನ ವ್ಯಕ್ತವಾಗಿದೆ. ನಂದಿಗಿರಿಧಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ :- ಸಿಡಿಲು ಬಡಿದು 11 ವರ್ಷದ ಬಾಲಕ ಸಾವು