ಕನ್ನಡ ಚಿತ್ರರಂಗ (Kannada filmindustry) ದ ದಿವಂಗತ ರೆಬೆಲ್ ಸ್ಟಾರ್ ಅಂಬರೀಶ್ (Ambreesh) ಮತ್ತು ಸಂಸದೆ ಸುಮಲತಾ (Sumalatha) ಪುತ್ರ ಅಭಿಷೇಕ್ ಅಂಬರೀಶ್ (Abhishek ambreesh) ಅವರಿಗೆ ಕಂಕಣ ಭಾಗ್ಯ ಕೂಡಿ ಬಂದಿದೆ. ಹೀಗೊಂದು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸದ್ದು ಮಾಡುತ್ತಿದೆ. ಡಿಸೆಂಬರ್ 11ರಂದು ಅಭಿಷೇಕ್ ಅಂಬರೀಶ್ ನಿಶ್ಚಿತಾರ್ಥ ನಡೆಯಲಿದ್ದು, ಕೆಲ ಸಿದ್ಧತೆಗಳು ಆಗಿವೆ.
ಉಳಿದ ತಯಾರಿ ಕೂಡ ನಡೆಯುತ್ತಿದೆ. ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ನಲ್ಲಿ ಅದ್ಧೂರಿಯಾಗಿ ನಿಶ್ಚಿತಾರ್ಥ ನಡೆಯಲಿದೆ ಎನ್ನಲಾಗಿದೆ. ಮೂಲಗಳ ಪ್ರಕಾರ ಅಭಿಷೇಕ್ ಕೈ ಹಿಡಿಯುತ್ತಿರುವ ಹುಡುಗಿ ಖ್ಯಾತ ಮಾಡೆಲ್ ಎನ್ನಲಾಗಿದೆ. ನಿಶ್ಚಿತಾರ್ಥದವರೆಗೆ ಹುಡುಗಿಯ ಬಗ್ಗೆ ಆಗಲಿ ಅಥವಾ ಮದುವೆ ಬಗ್ಗೆ ಆಗಲಿ ಯಾರಿಗೂ ವಿಚಾರ ತಿಳಿಯಬಾರದು ಎನ್ನುವ ಕಾರಣದಿಂದ ಹುಡುಗಿ ಹಾಗೂ ನಿಶ್ಚಿತಾರ್ಥದ ದಿನಾಂಕವನ್ನು ಕುಟುಂಬದ ಸದಸ್ಯರು ಅಧಿಕೃತವಾಗಿ ಘೋಷಿಸಿಲ್ಲ. ಇದನ್ನೂ ಓದಿ : – ಎಂಗೇಜ್ ಆದ ವೈಷ್ಣವಿ ಗೌಡ…? ವೈರಲ್ ಆದ ಫೋಟೋ
ಅಂಬರೀಶ್ ಬದುಕಿದ್ದಾಗ ಅಮರ್ ಸಿನಿಮಾ ಮೂಲಕ ಅಭಿಷೇಕ್ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ರು. ಅಷ್ಟಕ್ಕೂ ಅಭಿಷೇಕ್ ಕೈ ಹಿಡಿಯಲಿರುವ ಮಾಡೆಲ್ ಯಾರು ಎಂಬುದು ಅಭಿಮಾನಿಗಳಲ್ಲಿ ಕುತೂಹಲಕ್ಕೆ ಕಾರಣವಾಗಿದೆ.
ಇದನ್ನೂ ಓದಿ : – OTTಗೆ ಬಂತು ‘ಕಾಂತಾರ’ ಸಿನಿಮಾ – ನ.24ರಿಂದ ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ಪ್ರಸಾರ