ಪೈಲ್ವಾನ್ ಸಿನಿಮಾದ ನಿರ್ದೇಶಕ ಕೃಷ್ಣ ಅಭಿಷೇಕ್ ಅಂಬರೀಶ್ ಅವರಿಗಾಗಿ ಸಿನಿಮಾವೊಂದನ್ನು ನಿರ್ದೇಶನ ಮಾಡುತ್ತಿದ್ದು, ಈ ಸಿನಿಮಾದ ಫಸ್ಟ್ ಲುಕ್ ಅನ್ನು ಅಂಬರೀಶ್ ಹುಟ್ಟು ಹಬ್ಬದಂದು ಬಿಡುಗಡೆ ಮಾಡಲಾಗಿದೆ. ಯಂಗ್ ರೆಬಲ್ ಸ್ಟಾರ್ ಫಸ್ಟ್ ಲುಕ್ ನಲ್ಲಿ ರಗಡ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ.
ಸದ್ಯ ಮರಿ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್ ‘ಬ್ಯಾಡ್ ಮ್ಯಾನರ್ಸ್’ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದು, ಈ ನಡುವೆ ಅವರು ಹೊಸ ಸಿನಿಮಾವನ್ನು ಒಪ್ಪಿಕೊಂಡಿದ್ದಾರೆ. ಈ ಚಿತ್ರಕ್ಕೆ ಕಾಳಿ ಎಂದು ಹೆಸರಿಡಲಾಗಿದೆ. ಇಂದು ಮಂಡ್ಯದ ಗಂಡು ಅಂಬರೀಶ್ ಅವರ ಹುಟ್ಟು ಹಬ್ಬ. ಇದನ್ನೂ ಓದಿ :- ಅಂಬಿಗೆ ಇಂದು 70ನೇ ಹುಟ್ಟು ಹಬ್ಬ – ಭಾವುಕರಾಗಿ ಕವನ ಬರೆದ ಸುಮಲತಾ
ಈ ಹುಟ್ಟು ಹಬ್ಬಕ್ಕಾಗಿ ಕೃಷ್ಣ ಅವರು ತಮ್ಮ ಹೊಸ ಸಿನಿಮಾದ ನಾಯಕನ ಫಸ್ಟ್ ಲುಕ್ ರೆಡಿ ಮಾಡಿಸಿ, ಅಂಬರೀಶ್ ಅವರ ಪ್ರೀತಿಗಾಗಿ ಅದನ್ನು ರಿಲೀಸ್ ಮಾಡಿದ್ದಾರೆ. ಸದ್ಯ ಸೂರಿ ನಿರ್ದೇಶನದ ಬ್ಯಾಡ್ ಮಾನರ್ಸ್ ಸಿನಿಮಾದ ಕೊನೆಯ ಹಂತದ ಶೂಟಿಂಗ್ ನಲ್ಲಿದ್ದಾರಂತೆ ಅಭಿಷೇಕ್. ಈ ಸಿನಿಮಾ ಮುಗಿಯುತ್ತಿದ್ದಂತೆಯೇ ಕಾಳಿ ಚಿತ್ರದ ಚಿತ್ರೀಕರಣದಲ್ಲಿ ಅವರು ಪಾಲ್ಗೊಳ್ಳಲಿದ್ದಾರಂತೆ.
ಇದನ್ನೂ ಓದಿ :- ತಮ್ಮ ಮನೆಯಲ್ಲಿ ಕೆಲಸ ಮಾಡುತ್ತಿದ್ದ ದ್ಯಾವಮ್ಮ ಭೇಟಿ ನೀಡಿದ ಶಿವಣ್ಣ