ತಮಿಳುನಾಡು : ಟಯರ್ ಸ್ಪೋಟಗೊಂಡು ಆ್ಯಂಬುಲೆನ್ಸ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ತುಂಬು ಗರ್ಭಿಣಿ ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಕಲಕುರಿಚಿ ಜಿಲ್ಲೆಯಲ್ಲಿ ನಡೆದಿದೆ.
ಮೃತರನ್ನು ಸೊರಪುಟ್ಟ ಗ್ರಾಮದ ನಿವಾಸಿ ಗರ್ಭಿಣಿ ಜಯಲಕ್ಷಿ (26), ಅತ್ತೆ ಸೆಲ್ವಿ (55) ಹಾಗೂ ನಾದಿನಿ ಅಂಬಿಕಾ (30) ಎಂದು ಗುರುತಿಸಲಾಗಿದೆ. ಜಯಲಕ್ಷಿ ಅವರು 9 ತಿಂಗಳ ಗರ್ಭಿಣಿ. ಇವರಿಗೆ ಗುರುವಾರ ನಸುಕಿನ ಜಾವ ಹೆರಿಗೆ ನೋವು ಕಾಣಿಸಿಕೊಂಡಿದೆ. ಕೂಡಲೇ ಜಯಲಕ್ಷ್ಮಿಪತಿ 108 ಗೆ ಕರೆ ಮಾಡಿದ್ದಾರೆ. ಹೀಗಾಗಿ ಜಯಲಕ್ಷ್ಮಿ ಜೊತೆಗೆ ಅತ್ತೆ ಹಾಗೂ ಮಗಳು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಘಟನೆ ಸಂಭವಿಸಿದೆ.
ಘಟನೆಗೆ ಸಂಬಂಧಿಸಿದಂತೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಆಘಾತ ವ್ಯಕ್ತಪಡಿಸಿದ್ದಾರೆ. ಮೃತ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ಅತ್ತೆ ಹಾಗೂ ನಾದಿನಿ ಕುಟುಂಬಕ್ಕೆ ತಲಾ 3 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.