ಎಟಿಎಂನಲ್ಲಿ ಮಹಿಳೆ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಶಿಕ್ಷೆ ಪ್ರಕಟ

ಬೆಂಗಳೂರು: ಇಡೀ ದೇಶದ ಜನರನ್ನೇ ಬೆಚ್ಚಿ ಬೀಳಿಸಿದ್ದ ಎಟಿಎಂ ಹಲ್ಲೆ ಪ್ರಕರಣದ ಅಪರಾಧಿ ಮಧುಕರ್ ರೆಡ್ಡಿಗೆ ನ್ಯಾಯಾಲಯ 12 ವರ್ಷ ಜೈಲು ಶಿಕ್ಷೆ ವಿಧಿಸಿದೆ. ನಾಲ್ಕು ವರ್ಷಗಳ ಕಾಲ ಸುದೀರ್ಘ ವಾದ ಆಲಿಸಿದ ನ್ಯಾಯಾಲಯ ನಿನ್ನೆ ಮಧುಕರ್ ರೆಡ್ಡಿ ಅಪರಾಧಿ ಎಂದು ಹೇಳಿ ತೀರ್ಪನ್ನು ಇಂದಿಗೆ ಕಾಯ್ದಿರಿಸಿತ್ತು.
2016ರಲ್ಲಿ ನ್ಯಾಯಾಲಯಕ್ಕೆ ಪೊಲೀಸರು ಸಿ ರಿಪೋರ್ಟ್ ಸಲ್ಲಿಸಿದ್ದರು. 2017ರಲ್ಲಿ ಕೊಲೆ ಕೇಸ್ ಸಂಬಂಧ ಆಂಧ್ರ ಪ್ರದೇಶದ ಮದನಪಲ್ಲಿ ಪೊಲೀಸರು ಮಧುಕರ್ ರೆಡ್ಡಿಯನ್ನು ಬಂಧಿಸಿದ್ದರು.
ನವೆಂಬರ್ 19, 2013ರಂದು ಕಾರ್ಪೋರೇಷನ್ ಸರ್ಕಲ್ ನಲ್ಲಿರುವ ಕಾರ್ಪೋರೇಷನ್ ಎಟಿಎಂ ನಲ್ಲಿ ಹಣ ಡ್ರಾ ಮಾಡಿಕೊಳ್ಳಲು ಬಂದಿದ್ದ ಜ್ಯೋತಿ ಉದಯ್ ಮೇಲೆ ಮಧುಕರ್ ರೆಡ್ಡಿ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಹಣ ದೋಚಿಕೊಂಡು ಪರಾರಿಯಾಗಿದ್ದನು.