ಶೃಂಗೇರಿ ಮಹಿಳೆ ಮೇಲೆ ಆ್ಯಸಿಡ್ ದಾಳಿ ಪ್ರಕರಣದಲ್ಲಿ ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ 20 ಲಕ್ಷ ರೂ. ದಂಡ ವಿಧಿಸಿ ಚಿಕ್ಕಮಗಳೂರಿನ 2ನೇ ಜೆಎಂಎಫ್ ಸಿ ನ್ಯಾಯಲಯ ತೀರ್ಪು ನೀಡಿದೆ.
ನ್ಯಾಯಾಧೀಶ ಮಂಜುನಾಥ್ ಸಂಗ್ರೇಶಿ ಈ ಆದೇಶ ಹೊರಡಿಸಿದ್ದು, ಆರೋಪಿಗಳಾದ ಗಣೇಶ್ ಅಲಿಯಾಸ್ ಗಣಿ (36), ಮಹಮ್ಮದ್ ಕಬೀರ್ (31), ವಿನೋದ್ ಕುಮಾರ್(38), ಹಾಗೂ ಅಬ್ದುಲ್ ವಾಜೀದ್(37) ಅವರಿಗೆ ಜೀವಾವಧಿ ಶಿಕ್ಷೆ ನೀಡಲಾಗಿದೆ. ಆರೋಪಿಗಳು ತಲಾ 2.50 ಲಕ್ಷ ರೂ. ದಂಡ ಪಾವತಿಸಿದ ನಂತರವಷ್ಟೇ ಮೇಲ್ಮನವಿ ಸಲ್ಲಿಸಬಹುದು ಎಂದು ತೀರ್ಪಿನಲ್ಲಿ ತಿಳಿಸಿದ್ದಾರೆ.
2015, ಏಪ್ರಿಲ್ 18ರಂದು ಮಹಿಳೆ ಮೇಲೆ ಆ್ಯಸಿಡ್ ದಾಳಿ ನಡೆದಿದ್ದು, ಸುದೀರ್ಘ ವಿಚಾರಣೆ ನಂತರ ಆರೋಪಿಗಳು ದೋಷಿ ಎಂದು ಸಾಬೀತಾಗಿತ್ತು.