ಯುವತಿ ಮೇಲೆ ಆ್ಯಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸೆಂಟ್ ಜಾನ್ ಆಸ್ಪತ್ರೆಗೆ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಭೇಟಿ ನೀಡಿ ಯುವತಿಯ ಆರೋಗ್ಯ ವಿಚಾರಣೆ ಮಾಡಿದ್ದಾರೆ.
ನಂತರ ಮಾತನಾಡಿದ ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವತಿಯ ಜೊತೆ ಮಾತನಾಡಿದ್ದೇನೆ. ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದೇನೆ. ಅವರ ಕುಟುಂಬಸ್ಥರು ನೋವಲ್ಲಿದ್ದಾರೆ. ಸರ್ಕಾರಕ್ಕೆ ಈ ಘಟನೆಯಿಂದ ಅತೀವ ನೋವಾಗಿದೆ. ಸರ್ಕಾರದಿಂದ ವೈದ್ಯಕೀಯ ವೆಚ್ಚ ಬರಿಸುವ ಭರವಸೆ ನೀಡಲಾಗಿದೆ. ಇದನ್ನೂ ಓದಿ :- ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ – ತನ್ನ ಬಳಿಯಿದ್ದ ಮೊಬೈಲ್ ಒಡೆದು ಹಾಕಿದ ದಿವ್ಯಾ ಹಾಗರಗಿ
ನಾಗರೀಕ ಸಮಾಜದಲ್ಲಿ ಹೃದಯ ಕಲುಕುವ ಘಟನೆ ಇದು. ಬಿಎಂಸಿ ಯಿಂದ ಚರ್ಮ ತಜ್ಞರ ಜೊತೆ ಸಂಪರ್ಕದಲ್ಲಿದೇವೆ. ಸರ್ಕಾರ ಈ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿ ಇವತ್ತು, ನಾಳೆಯೊಳಗೆ ಆರೋಪಿಯನ್ನ ಬಂದಿಸುವ ಕೆಲಸ ಮಾಡಲಾಗುತ್ತೆ ಎಂದು ಹೇಳಿದ್ರು.
ಇದನ್ನೂ ಓದಿ :- PSI ಅಕ್ರಮದಲ್ಲಿ ಅರೆಸ್ಟ್ ಆದ ದಿವ್ಯಾ ಹಾಗರಗಿ ಹೈಡ್ರಾಮಾ