ACTOR DIGII- ನಟ ದಿಗಂತ್ ಕತ್ತಿಗೆ ಬಲವಾದ ಪೆಟ್ಟು – ಸ್ಥಿತಿ ಗಂಭೀರ – ಬೆಂಗಳೂರಿಗೆ ಏರ್ ಲಿಫ್ಟ್

ನಟ ದಿಗಂತ್ ( Dinganth) ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿದೆ. ಗೋವಾ(GOA)ದ ಸಮುದ್ರ ತಟದಲ್ಲಿ ಸೋಮರ್ ಸಾಲ್ಟ್ ಹೊಡೆಯುವ ವೇಳೆ ದಿಗಂತ್ ಕುತ್ತಿಗೆಗೆ ಪೆಟ್ಟು ಬಿದ್ದಿದೆ.

ಕುಟುಂಬದ ಜೊತೆ ನಟ ದಿಗಂತ್ ಗೋವಾ ಪ್ರವಾಸ (Goa Tour) ತೆರಳಿದ್ದರು. ಸದ್ಯ ಗೋವಾದಲ್ಲೆ ದಿಗಂತ್ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವೇ ಗಂಟೆಗಳಲ್ಲಿ ಏರ್ ಲಿಪ್ಟ್ (AIRLIFT) ಮೂಲಕ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಿಗಂತ್ ಅವರನ್ನು ಕುಟುಂಬಸ್ಥರು ಕರೆತರಲಿದ್ದಾರೆ ಎಂದು ಹೇಳಲಾಗಿದೆ. ಇದನ್ನೂ ಓದಿ :- ಹಿರಿಯ ನಟಿ ಪವಿತ್ರಾ ಲೋಕೇಶ್ ಮತ್ತೊಂದು ಮದುವೆಯಾಗಿದ್ದಾರಂತೆ…!

ನಟ ದಿಗಂತ್ಗೆ ಕುಟುಂಬ ಸಮೇತ ಗೋವಾ ಪ್ರವಾಸಕ್ಕೆ ತೆರಳಿದ್ದರು. ಆದರೆ ಗೋವಾದಲ್ಲಿ ಈ ಅವಘಡ ಸಂಭವಿಸಿದೆ.
ಕೆಲವು ವರ್ಷಗಳ ಹಿಂದೆ ವಿದೇಶದಲ್ಲಿ ದಿಗಂತ್ ಚಿತ್ರವೊಂದರ ಚಿತ್ರೀಕರಣ ನಡೆಸುವಾಗ ದುರ್ಘಟನೆಯೊಂದು ನಡೆದಿತ್ತು. ಈ ಚಿತ್ರೀಕರಣದ ವೇಳೆ ದಿಗಂತ್ ಕಣ್ಣೊಂದಕ್ಕೆ ಹಾನಿಯಾಗಿತ್ತು.

ಇದನ್ನೂ ಓದಿ :- ಜೂ.23ಕ್ಕೆ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಟ್ರೈಲರ್ ಬಿಡುಗಡೆ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!