ನಟ ಜಗ್ಗೇಶ್ ಅವರ ಪುತ್ರ ಗುರುರಾಜ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ಬೆಂಗಳೂರು- ಹೈದರಾಬಾದ್ ರಸ್ತೆಯಲ್ಲಿ ಸಂಭವಿಸಿದೆ.
ಬೆಂಗಳೂರು- ಹೈದರಬಾಬಾದ್ ರಸ್ತೆಯ ಅಗಲಗುರ್ಕಿ ಬಳಿ ಮರಕ್ಕೆ ಗುರುರಾಜ್ ಪ್ರಯಾಣಿಸುತ್ತಿದ್ದ ಬಿಎಂಡಬ್ಲ್ಯೂ ಕಾರು ಡಿಕ್ಕಿ ಹೊಡೆದು ಮುಂಭಾಗ ಸಂಪೂರ್ಣ ಜಖಂಗೊಂಡಿದೆ.
ಅಪಘಾತದಲ್ಲಿ ಗುರುರಾಜ್ ಅವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.