ಅಪಘಾತದಲ್ಲಿ ಗಾಯಗೊಂಡಿರುವ ಸ್ಯಾಂಡಲ್ ವುಡ್ ನಟ ಸಂಚಾರಿ ವಿಜಯ್ ಅವರ ಮೆದುಳು ಸ್ಪಂದಿಸುತ್ತಿಲ್ಲ ಎಂದು ಚಿಕಿತ್ಸೆ ನೀಡುತ್ತಿರುವ ಅಪೋಲೋ ಆಸ್ಪತ್ರೆಯ ವೈದ್ಯ ಡಾ.ಅರುಣ್ ನಾಯ್ಕ್ ತಿಳಿಸಿದ್ದಾರೆ.
ಬೈಕ್ ಅಪಘಾತದಲ್ಲಿ ತಲೆ ಹಾಗೂ ತೊಡೆಗೆ ಬಿದ್ದ ಬಲವಾದ ಪೆಟ್ಟಿನಿಂದ ಗಾಯಗೊಂಡಿರುವ ಸಂಚಾರಿ ವಿಜಯ್ ಅವರ ಮೆದುಳು 36 ಗಂಟೆಗಳಿಂದ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ. ಇದೇ ರೀತಿ ಮುಂದುವರಿದರೆ ಮೆದುಳು ಸಂಪೂರ್ಣ ನಿಷ್ಕ್ರಿಯಗೊಳ್ಳುವ ಸಾಧ್ಯತೆ ಇದೆ ಎಂದರು.
ಮೆದುಳಿನ ಊತ ಕಡಿಮೆ ಆಗಿಲ್ಲ. ಅಲ್ಲದೇ ಹೃದಯಕ್ಕೆ ಸ್ಪಂದಿಸುತ್ತಿಲ್ಲ. ಇದರಿಂದ ಅವರ ಉಸಿರಾಟ ನಿಧಾನವಾಗಿ ಕಡಿಮೆ ಆಗುವ ಸಾಧ್ಯತೆ ಇದೆ. ಪ್ರಸ್ತುತ ಅವರ ನಾಡಿಮಿಡಿತ ಎಲ್ಲವೂ ಸರಿಯಾಗಿದೆ ಎಂದು ಅವರು ವಿವರಿಸಿದರು.