ಬಾಲಿವುಡ್ (Bollywood )ಖ್ಯಾತ ನಟಿ ಶ್ರದ್ಧಾ ಕಪೂರ್ (Shradda Kapur) ಸಹೋದರ ಮತ್ತು ಬಾಲಿವುಡ್ ನಟ, ಡಿಜೆ ಸಿದ್ಧಾಂತ್ ಕಪೂರ್ (Siddanth Kapur) ಅವರನ್ನು ಡ್ರಗ್ಸ್ (Drugs) ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದಾರೆ.
ಎಂ.ಜಿ ರಸ್ತೆಯ ಟ್ರಿನಿಟಿ ಸರ್ಕಲ್ನಲ್ಲಿ ಪ್ರತಿಷ್ಠಿತ 5 ಸ್ಟಾರ್ ದಿ ಪಾರ್ಕ್ ಹೋಟೆಲ್ ಮೇಲೆ ಹಲಸೂರು ಪೊಲೀಸರು ದಾಳಿ ಮಾಡಿದ್ದಾರೆ. ಪಾರ್ಟಿಯಲ್ಲಿ ತೊಡಗಿದ್ದ ಯುವಕ ಯುವತಿ ಸೇರಿ ಒಟ್ಟು 50 ಜನರನ್ನ ವಶಕ್ಕೆ ಪಡೆದಿದ್ದರು. ಈ ಗುಂಪಿನಲ್ಲಿದ್ದ 35 ಜನರಿಗೆ ಮೆಡಿಕಲ್ ಟೆಸ್ಟ್ ಮಾಡಿಸಿದ್ದು, ಐವರು ಮಾದಕವಸ್ತು ಸೇವನೆ ಮಾಡಿರೋದು ದೃಢವಾಗಿದೆ. ಈ ಗುಂಪಿನಲ್ಲಿ ಸಿದ್ಧಾಂತ್ ಕಪೂರ್ ಸಹ ಇರುವುದು ಖಚಿತವಾಗಿದೆ. ಈ ಪರಿಣಾಮ ಸಿದ್ಧಾಂತ್ನನ್ನು ಪೊಲೀಸರು ಬಂಧಿಸಿದ್ದಾರೆ. ಡಿಸಿಪಿ ಭೀಮಾಶಂಕರ್ ಗುಳೇದ್ ಮಾತನಾಡಿ ಬಾಲಿವುಡ್ ನಟ ಸಿದ್ದಾಂತ್ ಕಪೂರ್ ಡ್ರಗ್ಸ್ ತೆಗೆದುಕೊಂಡಿರುವುದು ಸಾಬೀತಾಗಿದೆ. ಬ್ಲಡ್ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ರಿಪೋರ್ಟ್ ಬಂದಿದೆ. ಹೀಗಾಗಿ ಹಲಸೂರು ಪೊಲೀಸ್ ಠಾಣೆಯಲ್ಲಿ ವಶಕ್ಕೆ ಪಡೆದು ವಿಚಾರಣೆ ಮುಂದುವರೆಸುತ್ತಿದ್ದೇವೆ ಎಂದು ಹೇಳಿದ್ದಾರೆ. ಕಳೆದ ರಾತ್ರಿ ಹೋಟೆಲ್ ನಲ್ಲಿ ನಡೆಯುತ್ತಿದ್ದ ಪಾರ್ಟಿ ಮೇಲೆ ರೇಡ್ ಮಾಡಲಾಗಿತ್ತು.
100 ಕ್ಕೂ ಹೆಚ್ಚು ಜನ ಪಾರ್ಟಿಯಲ್ಲಿದ್ರು. ಅದರಲ್ಲಿ ಭಾಗಿಯಾಗಿದ್ದ ಕೆಲವರನ್ನ ಡ್ರಗ್ಸ್ ಟೆಸ್ಟ್ ಗೆ ಒಳಪಡಿಸಲಾಗಿತ್ತು. ಐವರಿಗೆ ಪಾಸಿಟಿವ್ ಬಂದಿತ್ತು. ಪಾರ್ಟಿಯಲ್ಲಿ ಉತ್ತರ ಭಾರತವರು ಜಾಸ್ತಿ ಇದ್ರು ಐದೂ ಜನ ಕೂಡ ಕರ್ನಾಟಕದವರಲ್ಲ. ಮೂವರು ಕರ್ನಾಟಕದಲ್ಲಿ ವಾಸವಿದ್ದಾರೆ ಪಾರ್ಟಿ ಓಪನ್ ಫಾರ್ ಪಬ್ಲಿಕ್ ಆಗಿದೆ. ಡಸ್ಟ್ ಬಿನ್ ಬಳಿ 7 ಎಂಡಿಎಂಎ ಸಿಕ್ಕಿದೆ. ದಾಳಿ ವೇಳೆ ಗಾಂಜಾ ಕೂಡ ಸಿಕ್ಕಿದೆ. ಸಿದ್ಧಾಂತ್ ಕಪೂರ್ ಡ್ರಗ್ಸ್ ತೆಗೆದುಕೊಂಡಿದ್ರು. ಡಿಜೆ ಗೂ ಪಾಸಿಟಿವ್ ಕಂಡು ಬಂದಿದೆ ಎಂದು ತಿಳಿಸಿದ್ದಾರೆ.
ಇದನ್ನು ಓದಿ :- ಬೆಂಗಳೂರಿನಲ್ಲಿ ರೋಡಿಗಿಳಿಯಲಿದ್ದಾರೆ ಮಾರ್ಷಲ್ಸ್ – ಮಾಸ್ಕ್ ಕಡ್ಡಾಯಗೊಳಿಸಲು ಪಾಲಿಕೆ ನಿರ್ಧಾರ