ಚಂದನವನಕ್ಕೆ `ಗಂಡ ಹೆಂಡತಿ’ ಚಿತ್ರದ ಮೂಲಕ ಲಗ್ಗೆಯಿಟ್ಟ ನಟಿ ಸಂಜನಾ ಗಲ್ರಾನಿ ಸಾಕಷ್ಟು ಸಿನಿಮಾಗಳ ಮೂಲಕ ಸಂಚಲನ ಮೂಡಿಸಿದ್ದಾರೆ. ಕನ್ನಡ ಮಾತ್ರವಲ್ಲದೇ ಪರಭಾಷಾ ಚಿತ್ರಗಳಲ್ಲೂ ನಟಿಸಿ ಸೈ ಎನಿಸಿಕೊಂಡಿದ್ದಾರೆ.
ಕೆಲ ದಿನಗಳ ಹಿಂದೆಷ್ಟೇ ತಾವು ಗರ್ಭೀಣಿಯಾಗಿರುವ ವಿಚಾರವನ್ನ ಸೋಷಿಯಲ್ ಮೀಡಿಯಾ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದರು. ಈಗ ಸಂಜನಾ ತಮ್ಮ ಸೀಮಂತದ ಶಾಸ್ತ್ರದ ಸಂಭ್ರಮದ ಕ್ಷಣಗಳ ಫೋಟೋಗಳನ್ನು ಇನ್ಸ್ಟಾಗ್ರಾಂನಲ್ಲಿ ಶೇರ್ ಮಾಡಿದ್ದಾರೆ. ಸದ್ಯ ಈ ಫೋಟೋಗಳು ಭಾರೀ ವೈರಲ್ ಆಗಿದೆ.
ದಕ್ಷಿಣ ಭಾರತದ ಶೈಲಿಯಲ್ಲಿ ಪತಿ ಅಜೀಜ್ ಪಾಷಾ ಮತ್ತು ಕುಟುಂಬಸ್ಥರ ಸಮ್ಮುಖದಲ್ಲಿ ಸೀಮಂತ ಶಾಸ್ತ್ರ ನಡೆದಿದೆ. ಗರ್ಭಾವಸ್ಥೆಯ ಒಂಭನೇ ತಿಂಗಳಿಗೆ ಪ್ರವೇಶಿಸುತ್ತಿದ್ದು, ನನ್ನ ಮಗು ನಮ್ಮ ಮನೆ ಪ್ರವೇಶಿಸಲು ಒಂದು ತಿಂಗಳು ಬಾಕಿಯಿದೆ. ತುಂಬಾ ಪ್ರೀತಿ ಮತ್ತು ವಾತ್ಸಲ್ಯಕ್ಕಾಗಿ ಎಲ್ಲರಿಗೂ ಧನ್ಯವಾದಗಳು ಎಂದು ಇನ್ಸ್ಟಾಗ್ರಾಂನಲ್ಲಿ ಖಾತೆಯಲ್ಲಿ ಸೀಮಂತದ ಫೋಟೋಗಳು ಶೇರ್ ಮಾಡಿದ್ದಾರೆ. ನೆಚ್ಚಿನ ನಟಿಯ ಖುಷಿ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ.
ಇದನ್ನೂ ಓದಿ :- ಇದು ಜನಗಳ ಹಬ್ಬ, ನಮ್ಮ ಮನೆ ಹಬ್ಬ ಅಲ್ಲ – ರಾಘವೇಂದ್ರ ರಾಜ್ ಕುಮಾರ್